×
Ad

ಪೋಕ್ಸೋ‌ ಪ್ರಕರಣ: ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ‌

Update: 2025-02-07 10:50 IST

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. 

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಭಾಗಶ: ಪುರಸ್ಕರಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ  ಆದೇಶ‌ ಹೊರಡಿಸಿದೆ.

ಇದೀಗ ಧಾರವಾಡ ಹೈಕೋರ್ಟ್​ ಪೀಠ, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ ಹೊರತು ವಿಚಾರಣೆ ಎದುರಿಸಲೇಬೇಕಾಗಿದೆ. ತಾಂತ್ರಿಕ ಕಾರಣದಿಂದ ಈ ಪ್ರಕರಣವನ್ನು ಹೈಕೋರ್ಟ್​, ಪೋಕ್ಸೋ ಕೋರ್ಟ್​ಗೆ ವಾಪಸ್ ಮರಳಿಸಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೋರ್ಟ್​​ನಲ್ಲಿ ವಿಚಾರಣೆ ಎದುರಿಸಬೇಕಿದೆ.

ಪ್ರಕರಣದ ಹಿನ್ನೆಲೆ :

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರಕಾರವು ಪ್ರಕರಣವನ್ನು ಸಿಐಡಿಗೆ  ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್‌ ಮಾಡಿ ►https://whatsapp.com/channel/0029VaA8ju86LwHn9OQpEq28

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News