×
Ad

ಪೋಕ್ಸೋ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ

Update: 2024-06-13 13:09 IST

ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಈಗ ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News