×
Ad

ಹುಬ್ಬಳ್ಳಿ: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

Update: 2023-07-13 10:09 IST

ಹುಬ್ಬಳ್ಳಿ, ಜು.13: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.

ಬೆಂಡಿಗೇರಿ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡವರು. ದೊಡ್ಡಮನಿ ಕಾಲನಿಯಲ್ಲಿ ವಾಸವಿದ್ದ ಇವರು ತಾವು ಬಾಡಿಗೆಗೆಗಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಗೊಳ್ಳಿ ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News