×
Ad

ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ

Update: 2023-08-02 12:50 IST

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಫೋಟೊ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಹೈವೇ ಪೆಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ. 

ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ಇತ್ತೀಚೆಗೆ  ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು. 

ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಕಲಾಗಿದ್ದು, ಇಡೀ ದಿನ ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News