ಬಿಜೆಪಿ ಮುಖಂಡನಿಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು: ಡಾ.ಜಿ. ಪರಮೇಶ್ವರ್
Update: 2026-01-25 23:39 IST
ಗೃಹ ಸಚಿವ ಡಾ.ಜಿ.ಪರಮೇಶ್ವರ್ (PTI)
ಬೆಂಗಳೂರು: ಜಾರಿಯ ಹಂತದಲ್ಲಿರುವಾಗಲೇ ದ್ವೇಷ ಭಾಷಣ ಮಸೂದೆಯ ಅಡಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್ ನೀಡಿರುವ ವಿಚಾರವಾಗಿ ಮಾಹಿತಿ ತರಿಸಿಕೊಳ್ಳುತ್ತೇನೆ. ಇನ್ನೊಂದೆಡೆ, ಈ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿಲ್ಲ. ಇದು ಕಾನೂನಾಗದ ಕಾರಣ ಈ ಮಸೂದೆಯ ಅಡಿ ನೋಟಿಸ್ ನೀಡಿದ್ದು ತಪ್ಪು. ಪೊಲೀಸರು ಯಾಕೆ ಈ ರೀತಿ ಮಾಡಿದ್ದಾರೆ ಎನ್ನುವುದನ್ನು ಪರಿಶೀಲನೆ ನಡೆಸಬೇಕು ಎಂದು ಉಲ್ಲೇಖಿಸಿದರು.