×
Ad

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರ ದಾಳಿ: ಇಬ್ಬರ ಬಂಧನ, ಮೂವರು ಮಹಿಳೆಯರ ರಕ್ಷಣೆ

Update: 2023-06-23 23:39 IST
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಜೂ.23: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿ, ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ತೀರ್ಥಹಳ್ಳಿ ಪಟ್ಟಣದಲ್ಲಿ ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್ ಕೆ.ಎಸ್.(33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ ಎಂ.(37) ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್ಪಿಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತೀರ್ಥಹಳ್ಳಿ ಇನ್ ಸ್ಪೆಕ್ಟರ್ ಅಶ್ವಥಗೌಡ, ಪಿಎಸ್ಸೈ ಸಾಗರ್ ಅತ್ತರವಾಲ, ಪಿಎಸ್ಸೈ ಗಾದಿಲಿಂಗಪ್ಪ ಗೌಡರ್, ಪೊಲೀಸ್ ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರದ ಕಿರಣ್ ಕುಮಾರಿ ದಾಳಿಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News