×
Ad

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್‌ ದಾಳಿ; ಆರು ಮಹಿಳೆಯರ ರಕ್ಷಣೆ

Update: 2024-02-09 14:52 IST

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಆರು ಮಹಿಳೆಯರನ್ನು ರಕ್ಷಿಸಿರುವ ಘಟನೆ ನಗರದ ಹೆಚ್.ಎ.ಎಲ್. ಪೊಲೀಸ್ ಠಾಣಾ ಸರಹದ್ದಿನ ಮಾರತ್ ಹಳ್ಳಿ ಔಟರ್ ರಿಂಗ್ ರಸ್ತೆಯಲ್ಲಿ ನಡೆದಿದೆ.

ವಿ.ಐ.ಪಿ. ಸ್ಪಾವೊಂದರಲ್ಲಿ ಹೊರರಾಜ್ಯದ ಅಮಾಯಕ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಪಾ ದ ಮ್ಯಾನೇಜರ್ ತಲೆ ಮರೆಸಿಕೊಂಡಿದ್ದು, ಆತನ ಸಹಾಯಕನನ್ನು ವಶಕ್ಕೆ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News