×
Ad

ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ: ನಟ ಕಿಶೋರ್‌

Update: 2024-01-22 15:18 IST

Photo: Kishore Kumar Huli (FB) 

ಬೆಂಗಳೂರು: ಧರ್ಮ, ದೇವರುಗಳು ರಾಜಕಾರಿಣಿಗಳ ಕೈಗೆ ಹೋಗಿ ತಾವು ಪ್ರಶ್ನಾತೀತರಾಗುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ ಎಂದು ನಟ ಕಿಶೋರ್‌ ಕುಮಾರ್‌ ಹೇಳಿದ್ದಾರೆ.

ಈ ಕುರಿತು ಫೇಸ್ ಬುಕ್‌ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಅವರು, ʼಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ. ನಾವು ನೋಡದ್ದೇನಲ್ಲ. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವವಾಗುತ್ತಿದೆ. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳುʼ ಎಂದು ಬರೆದುಕೊಂಡಿದ್ದಾರೆ.

"ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು. ಧರ್ಮ ಮತ್ತು ದೇವರು ರಾಜಕಾರಿಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿ ಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ" ಎಂದು ಎಚ್ಚರಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News