ಚಿತ್ರದುರ್ಗ: ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಚಿತ್ರ ಪ್ರದರ್ಶನ
Update: 2023-10-08 20:19 IST
Credit: prajavani.net
ಚಿತ್ರದುರ್ಗ: ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರವನ್ನು ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪ್ರದರ್ಶಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಶೋಭಾಯಾತ್ರೆ ವೇಳೆ ಗೋಡ್ಸೆ, ಸಾವರ್ಕರ್ ಚಿತ್ರ ಪ್ರದರ್ಶನ ಮಾಡಲಾಗಿದೆ.
ಜೊತೆಗೆ ಶರತ್ ಮಡಿವಾಳ, ಹರ್ಷ ಸೇರಿ ಇತರರ ಭಾವಚಿತ್ರಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ.
ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ 21 ದಿನಗಳ ಕಾಲ ಪೂಜೆ ಕೈಂಕರ್ಯಗಳನ್ನು ಮಾಡಲಾಗಿತ್ತು.
ಕೊನೆದಿನ ಹಿಂದೂಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ನಡೆದಿದ್ದು, ಮೆರವಣಿಗೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಕೆ.ಸಿ.ವೀರೇಂದ್ರ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು.