ರಾಜ್ಯದಲ್ಲಿ ಏಳು ದಿನಗಳ ಕಾಲ ಮಳೆ ಸಾಧ್ಯತೆ; ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Update: 2026-08-02 20:22 IST

ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ಮುಂದಿನ ಏಳು ದಿನಗಳ ಕಾಲ ಮಳೆಯಾಗಲಿದ್ದು, ಹವಾಮಾನ ಇಲಾಖೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿಯ ಉಳಿದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆ, ಮಲೆನಾಡು ಜಿಲ್ಲೆಗಳಾದ ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News