ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿದ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದೆ ಎಂದು India Today ವರದಿ ಮಾಡಿದೆ.

RSS ಅನ್ನು ಅಂತರರಾಜ್ಯ ಶಸ್ತ್ರಾಸ್ತ್ರ ಜಾಲದೊಂದಿಗೆ ಸಂಪರ್ಕಿಸುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆ (AI) ಮೂಲಕ ತಿರುಚಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಮೂಲಕ ಸಂಸ್ಥೆಯ ಖ್ಯಾತಿಗೆ ಧಕ್ಕೆ ತರುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಬಿಹಾರ ಮತ್ತು ಹರ್ಯಾಣದಲ್ಲಿ ಒಟ್ಟು 44,250 ಜೀವಂತ ಕಾರ್ಟ್ರಿಜ್‌ ಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ RSS ನಂಟಿರುವ ವ್ಯಕ್ತಿಗಳಿದ್ದಾರೆ ಎಂಬಂತೆ ಪ್ರಿಯಾಂಕ್ ಖರ್ಗೆ ತಮ್ಮ ಪೋಸ್ಟ್‌ ನಲ್ಲಿ ಬಿಂಬಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಚಿವರ ಪೋಸ್ಟ್‌ ನಿಂದ RSS ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು RSS ಸದಸ್ಯರು, ಪ್ರಿಯಾಂಕ್ ಖರ್ಗೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಈ ಆರೋಪಗಳಿಗೆ ಪ್ರಿಯಾಂಕ್ ಖರ್ಗೆ ಅಥವಾ ಕಾಂಗ್ರೆಸ್ ಪಕ್ಷ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು India Today ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor