×
Ad

ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ ಗೆ ಆರ್.ಅಶೋಕ್ ಮನವಿ

Update: 2023-07-05 22:27 IST

ಬೆಂಗಳೂರು, ಜು. 5: ‘ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನದ ರೇಸ್‍ನಲ್ಲಿ ನಾನು ಇಲ್ಲ. ಆದರೆ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ನೀಡಿ ಎಂದು ಪಕ್ಷರ ವರಿಷ್ಠರ ಮುಂದೆ ಮನವಿ ಮಾಡಿದ್ದೇನೆ’ ಮಾಜಿ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. 

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ವಿಪಕ್ಷ ನಾಯಕನ ಆಯ್ಕೆ ಬಗ್ಗೆ ನಿನ್ನೆ ಕೇಂದ್ರ ನಾಯಕರು ನಮ್ಮ ಮಾಹಿತಿ ಪಡೆದು ಹೊಸದಿಲ್ಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಬಳಿ ಚರ್ಚಿಸಿ ಸಂಜೆ ವೇಳೆಗೆ ಪ್ರತಿಪಕ್ಷ ನಾಯಕರು ಯಾರು ಎಂದು ಪ್ರಕಟಿಸಲಿದ್ದಾರೆ ಎಂದು ಹೇಳಿದರು. 
Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News