×
Ad

ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ: ಡಾ ಕೆ ಸುಧಾಕರ್‌

Update: 2023-07-29 12:14 IST

ಚಿಕ್ಕಬಳ್ಳಾಪುರ: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ ನೋಡೋಣ ಎಂದು ಮಾಜಿ ಸಚಿವ ಡಾ ಕೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಸ್ವತಂತ್ರವಾಗಿ ಸ್ಪರ್ಧಿಸಿದರೆ 5 ಸಾವಿರ ಮತಗಳನ್ನು ಪಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಮುಖಂಡರ ಶ್ರಮದಿಂದ ಗೆದ್ದಿರಬಹುದು ಎಂದರು.

ನಾವು ಸೋತಿರಬಹುದು. ಆದರೆ ಸತ್ತಿಲ್ಲ. ಕ್ಷೇತ್ರದಲ್ಲಿ ದಿನೇ ದಿನೇ ಶಾಸಕರ ಬೆಂಬಲಿಗರ ಉಪಟಳ ಹೆಚ್ಚಾಗಿದೆ.ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೆ ತೊಂದರೆ ಕೊಟ್ಟರೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News