×
Ad

ಕುಮಾರಸ್ವಾಮಿ ಅಹಿಂದ ಸಮುದಾಯದ ಏಳಿಗೆ ಸಹಿಸುವುದಿಲ್ಲ : ಪ್ರದೀಪ್ ಈಶ್ವರ್

Update: 2024-07-15 19:40 IST

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಹಿಂದ ಸಮುದಾಯದ ಏಳಿಗೆ ಸಹಿಸುವುದಿಲ್ಲ. ಹೀಗಾಗಿಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯದ ಅತಿದೊಡ್ಡ ನಾಯಕ. ಅದನ್ನು ನೀವು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅಲ್ಲದೆ, ತಮ್ಮದೇ ಸಮುದಾಯ ವ್ಯಕ್ತಿ ಉಪಮುಖ್ಯಮಂತ್ರಿ ಆದರೂ ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯ ಬಗ್ಗೆ ಮುಡಾ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಈಗಾಗಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ. ಆದರೆ, ಬಿ.ಎಸ್.ಯಡಿಯೂರಪ್ಪ ಅವರು 2011ರ ವಿಧಾನಪರಿಷತ್‍ನಲ್ಲಿ ಭಾಷಣದ ವೇಳೆ ದೇವೇಗೌಡ ಕುಟುಂಬದ ವಿರುದ್ಧ ಮಾತನಾಡಿದ್ದರು. ಜತೆಗೆ, ಮುಡಾ ವಿಚಾರದಲ್ಲಿ ಬಿಎಸೈ ನಿಮ್ಮ ವಿರುದ್ಧ ಮಾತನಾಡಿದ್ದಾರೆ. ಇದೇ ವಿಚಾರಕ್ಕೆ ಈಗ ಬಿಜೆಪಿ ಜೊತೆ ಸೇರಿ ಪ್ರತಿಭಟನೆ ಮಾಡುತ್ತಿರುವುದು ನನಗೆ ಅರ್ಥವಾಗಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News