×
Ad

ಸಿ.ಜೆ.ರಾಯ್ ಅವರೇ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? : ಪ್ರದೀಪ್ ಈಶ್ವರ್ ಶಂಕೆ

Update: 2026-01-31 21:00 IST

ಸಿ.ಜೆ.ರಾಯ್ /ಪ್ರದೀಪ್ ಈಶ್ವರ್

ಬೆಂಗಳೂರು : ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಹಲವು ಅನುಮಾನ ಇದ್ದು, ಅವರು ನಿಜವಾಗಿಯೂ ಪಿಸ್ತೂಲಿನಿಂದ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? ಎಂದು ಕಾಂಗ್ರೆಸ್ ಪ್ರದೀಪ್ ಈಶ್ವರ್ ಶಂಕೆ ವ್ಯಕ್ತಪಡಿಸಿದ್ದಾರೆ.

ಕನಕಪುರದಲ್ಲಿ ನಡೆಯುತ್ತಿರುವ ಕನಕೋತ್ಸವದಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಆದ ಸ್ಥಳದಲ್ಲಿ ಸಿಸಿಟಿವಿ ಇಲ್ಲ, ಇದ್ದವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾತ್ರ. ಒಳಗಡೆ ಏನಾಗಿದೆ ಎನ್ನುವುದು ಗೊತ್ತಿಲ್ಲ ಎಂದರು.

ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಬಿಜೆಪಿಯವರು ಚುನಾವಣೆಗೆ ನೂರಾರು ಕೋಟಿ ದುಡ್ಡು ಕೇಳಿದ್ದಾರೆ. ಅವರು ಹಣ ಕೊಡದಿದ್ದಕ್ಕೆ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಇಂತಹ ಭ್ರಷ್ಟ ಬಿಜೆಪಿಯಿಂದ ನಮ್ಮ ದೇಶ ಅಭಿವೃದ್ಧಿ ಆಗಲ್ಲ. ಅಶೋಕಣ್ಣ, ಸುನೀಲಣ್ಣ, ಯತ್ನಾಳ್ ಅವರು ಮಾತ್ರವಲ್ಲದೆ, ಮೈಸೂರಿನ ಒಂದು ಕೋತಿ ಎಲ್ಲದಕ್ಕೂ ಬಾಯಿ ಬಡಿದುಕೊಳ್ತಾರೆ. ಇದರ ಬಗ್ಗೆ ಯಾಕೆ ಯಾರೂ ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಒಬ್ಬ ಸಾಮಾನ್ಯ ವ್ಯಕ್ತಿ ಹಣ ಸಂಪಾದನೆ ಮಾಡಲು ಬಿಜೆಪಿ ಬಿಡುತ್ತಿಲ್ಲ. ಅವರಿಗೆ ಸಾಲ ಇಲ್ಲ, ಯಾವುದೇ ಸಮಸ್ಯೆ ಇಲ್ಲ ಕಳೆದ ಒಂದು ತಿಂಗಳಿನಿಂದ ಆದಾಯ ತೆರಿಗೆ ಅಧಿಕಾರಿಗಳು ಅವರಿಗೆ ಕಿರುಕುಳ ನೀಡಿದೆ. ಕೇಂದ್ರದಲ್ಲಿ ಬಿಜೆಪಿ ಇದ್ದರೆ ಇದೇ ಕಿರುಕುಳ ಮುಂದುವರಿಯುತ್ತದೆ. ಈ ಬಗ್ಗೆ ಎಸ್‍ಐಟಿ ತನಿಖೆ ಆಗಲಿ ಎಂದು ಅವರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - Darshan T

contributor

Similar News