×
Ad

‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ’ | 12,003 ಮೀನುಗಾರಿಕಾ ದೋಣಿಗಳಿಗೆ ದ್ವಿಮುಖ ಸಂಪರ್ಕ ಸಾಧನ ಅಳವಡಿಕೆ : ಸಂಪುಟ ನಿರ್ಧಾರ

Update: 2025-11-13 18:26 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ನಿರ್ವಹಣೆ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ 12,003 ಮೀನುಗಾರಿಕಾ ದೋಣಿಗಳಿಗೆ 43.69 ಕೋಟಿ ರೂ.ವೆಚ್ಚದಲ್ಲಿ ದ್ವಿಮುಖ ಸಂಪರ್ಕ ಸಾಧನಗಳನ್ನು ಅಳವಡಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

43.69 ಕೋಟಿ ರೂ.ಗಳಲ್ಲಿ ಕೇಂದ್ರ ಸರಕಾರದ ಪಾಲು 26.21 ಕೋಟಿ ರೂ., ರಾಜ್ಯ ಸರಕಾರದ ಪಾಲು 17.48 ಕೋಟಿ ರೂ.ಗಳಿರುತ್ತದೆ. ಈ ದ್ವಿಮುಖ ಸಾಧನಗಳನ್ನು ಅಳವಡಿಸಲು ಕೇಂದ್ರ ಸರಕಾರದಿಂದ ಅನುಮೋದಿಸಲ್ಪಟ್ಟ ಇಸ್ರೋ ರವರ ವಾಣಿಜ್ಯ ಸಂಸ್ಥೆಯಾದ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೆ ಸಾಲಿನ ಬಜೆಟ್‍ನಲ್ಲಿ ‘ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ.ಗಳ ಅನುದಾನದಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿರುವ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ ಎಂದು ಪ್ರಸ್ತಾಪಿಸಿದ್ದರು ಎಂದು ಎಚ್.ಕೆ.ಪಾಟೀಲ್ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News