×
Ad

ಸತೀಶ್ ಸೈಲ್ ಶಾಸಕತ್ವ ವಜಾಗೊಳಿಸಿ : ಪ್ರಹ್ಲಾದ್ ಜೋಶಿ ಆಗ್ರಹ

Update: 2024-10-26 21:50 IST

ಬೆಂಗಳೂರು : ಬೇಲೇಕೆರೆ ಅದಿರು ನಾಪತ್ತೆ ಪ್ರಕರಣದಲ್ಲಿ ದೀರ್ಘ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಸತೀಶ್ ಸೈಲ್ ಶಾಸಕತ್ವ ಅನರ್ಹಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೇಕೆರೆ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ನ್ಯಾಯಾಲಯ ಶಾಸಕ ಸತೀಶ್ ಸೈಲ್‍ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದರು.

ಕಾಂಗ್ರೆಸ್ ನಾಯಕರು ಕಳ್ಳ ಕಾಕರ ಪರ ನಿಂತಿದ್ದಾರೆ. ಅಂತೆಯೇ ಶಾಸಕ ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್‍ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. ಕಾಂಗ್ರೆಸ್ ಪಕ್ಷ ಭ್ರಷ್ಟರ ಪಕ್ಷ ಎಂಬುದಕ್ಕೆ ಈ ಪ್ರಕರಣ ಮತ್ತೊಂದು ಉದಾಹರಣೆ ಎಂದು ಅವರು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News