×
Ad

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಾಬೀತು: ಪರಿಣಾಮಕಾರಿ ತನಿಖೆ ನಡೆಸಿದ ಪೊಲೀಸರಿಗೆ 35 ಲಕ್ಷ ರೂ.ನಗದು ಬಹುಮಾನ!

Update: 2026-01-23 22:25 IST

ಪ್ರಜ್ವಲ್ ರೇವಣ್ಣ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಆದೇಶದಂತೆ ಡಿಜಿ ಮತ್ತು ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ 20 ಸಾವಿರ ರೂ.ನಂತೆ ಒಟ್ಟು 25 ಲಕ್ಷ ರೂ., ಡಿಜಿಪಿ, ಎಡಿಜಿಪಿ ಹಾಗೂ ಐಜಿಪಿ ಹುದ್ದೆಯ ಅಧಿಕಾರಿಗಳಿಗೆ ತಲಾ 8 ಸಾವಿರ ರೂ.ನಂತೆ ಒಟ್ಟು 3 ಲಕ್ಷ ರೂ. ಮಂಜೂರಾಗಿದೆ. ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಲಾ 5 ಸಾವಿರ ರೂ.ನಂತೆ 2 ಲಕ್ಷ ರೂ. ನೀಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 1 ಲಕ್ಷ ರೂ. ಬಹುಮಾನ ನೀಡಲಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳ ಪರಿಣಾಮಕಾರಿ ತನಿಖೆ ಮತ್ತು ವಿಚಾರಣೆಯನ್ನು ಗುರುತಿಸಿ ಈ ಬಹುಮಾನಗಳನ್ನು ನೀಡಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ವೃತ್ತಿಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಈ ನಗದು ಬಹುಮಾನವನ್ನು ನೀಡಲಾಗಿದೆ ಎಂದು ಒಳಾಡಳಿತ ಇಲಾಖೆ(ಪೊಲೀಸ್ ವೆಚ್ಚ)ಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ವನಜ ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News