ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಜಾ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜೈಲು ಕೊಠಡಿಯಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಬೆಳವಣಿಗೆಗಳು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರಿಗೆ ಎಫ್‌ಎಸ್‌ಎಲ್ ರಿಪೋರ್ಟ್ ಸಿಕ್ಕಿದೆ, ಇದರಲ್ಲಿ ಮೊಬೈಲ್ ಡೇಟಾದ ಮಾಹಿತಿ ಲಭ್ಯವಾಗಿದೆ. ಪ್ರಜ್ವಲ್ ಬಳಸಿದ್ದ ಮೊಬೈಲ್‌ನಲ್ಲಿ 173 ಫೈಲ್‌ಗಳು ಪತ್ತೆಯಾಗಿದ್ದು, ಪೆನ್‌ಡ್ರೈವ್‌ನಲ್ಲಿ 100ಕ್ಕೂ ಹೆಚ್ಚು ವಿಡಿಯೋಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಪ್ರಜ್ವಲ್ ರೇವಣ್ಣ ಬಳಿಯಿದ್ದ ಮೊಬೈಲ್‌ ನಲ್ಲಿ ಸಿನಿಮಾಗಳು, ವೆಬ್‌ಸೀರಿಸ್‌ಗಳು ಸೇರಿದಂತೆ ವಿವಿಧ ವಿಡಿಯೋಗಳು  ಇದ್ದವು ಎಂದು ಎಫ್​ಎಸ್​ಎಲ್ ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ. ಹಾಗೆಯೇ  ಪೆನ್‌ಡ್ರೈವ್‌ನಲ್ಲೂ 100ಕ್ಕೂ ಹೆಚ್ಚು ವಿಡಿಯೋಗಳು ಪತ್ತೆಯಾಗಿವೆ. ಅದರಲ್ಲಿ ಅಶ್ಲೀಲ ವಿಡಿಯೋಗಳು ಇದ್ದವು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂಬುದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ಅವರ  ಜೈಲು ಕೊಠಡಿಯಲ್ಲಿ ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಎಫ್​ಎಸ್​ಎಲ್ ವರದಿಯಲ್ಲಿನ ಅಂಶಗಳು, ಮೊಬೈಲ್ ಡೇಟಾ ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ ಎಂದು ತಿಳಿದುಬಂದಿದೆ. ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor