×
Ad

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ತೀರ್ಪು ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

Update: 2025-07-18 23:02 IST

ಪ್ರಜ್ವಲ್ ರೇವಣ್ಣ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರಿನ ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣವಾಗಿದ್ದು, ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲರಾದ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ ೩೦ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News