×
Ad

ನಾನು ಬದಲಾವಣೆಗೆ ಮತ ನೀಡಿದ್ದೇನೆ, ದ್ವೇಷದ ವಿರುದ್ಧ ಮತ ನೀಡಿದ್ದೇನೆ: ಪ್ರಕಾಶ್‌ ರಾಜ್‌

Update: 2024-04-26 11:29 IST

Photo:X/@prakashraaj

ಬೆಂಗಳೂರು: ನಟ ಪ್ರಕಾಶ್‌ ರಾಜ್‌ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ್ದಾರೆ.

ನಂತರ ಎಕ್ಸ್‌ನಲ್ಲಿ ಅವರು ವೀಡಿಯೋ ಸಂದೇಶವನ್ನು ಪೋಸ್ಟ್‌ ಮಾಡಿ ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್‌ಗೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ನಾನು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ,” ಎಂದು ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ಅವರು “ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ #ಜಸ್ಟ್‌ಆಸ್ಕಿಂಗ್#ಸೇವ್‌ಡೆಮಾಕ್ರೆಸಿಸೇವ್‌ಇಂಡಿಯಾ” ಎಂದು ಬರೆದಿದ್ದಾರೆ.

ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌ “ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News