×
Ad

ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ | ಮಾಜಿ ಸಂಸದ ಪ್ರತಾಪ್‍ ಸಿಂಹ ವಿರುದ್ಧ ಎಫ್‍ಐಆರ್

Update: 2024-07-31 20:16 IST

ಬೆಂಗಳೂರು : ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‍ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರವಾಗಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟಿಸಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎ1 ಪುನೀತ್ ಕೆರೆಹಳ್ಳಿ, ಎ2 ಪ್ರತಾಪ್ ಸಿಂಹ ಎಂದು ಎಫ್‍ಐಆರ್‌ ನಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News