×
Ad

ಬೆಲೆ ಏರಿಕೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ: ಬಸವರಾಜ ಬೊಮ್ಮಾಯಿ ಟೀಕೆ

Update: 2023-08-01 19:07 IST

ಬೆಂಗಳೂರು, ಆ.1: ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆಯ ಶಾಕ್, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೇಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟರ್ ವಾಹನ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ. ಇದು ಕಾಂಗ್ರೆಸ್ ಸರಕಾರದ ದುಬಾರಿ ದುನಿಯಾ ಸೃಷ್ಟಿ. ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News