×
Ad

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

Update: 2025-11-01 11:46 IST

ನರೇಂದ್ರ ಮೋದಿ | Photo Credit : PTI

ಬೆಂಗಳೂರು : ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕದ ಜನರ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಸ್ಮರಿಸುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾಹಿತ್ಯ, ಕಲೆ, ಸಂಗೀತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಪ್ರತಿಫಲಿಸಿದ್ದು, ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News