×
Ad

ನಾಳೆ(ಜ.19) ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

Update: 2024-01-18 21:05 IST

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‍ನಲ್ಲಿ ನೂತನ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಕ್ಯಾಂಪಸ್ ಉದ್ಘಾಟನೆಗೆ ಜ.19ರಂದು ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 2.10ರ ಸುಮಾರಿಗೆ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಲ್ಲಿಂದ ನೇರವಾಗಿ ಏರೋಸ್ಪೇಸ್ ಪಾರ್ಕ್‍ಗೆ ಭೇಟಿ ನೀಡಿ, ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆ 8ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಲವು ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News