×
Ad

ಎ.28ರಂದು ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

Update: 2024-04-23 19:01 IST

ಬೆಳಗಾವಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಎ.28ರಂದು ಚುನಾವಣಾ ಪ್ರಚಾರಕ್ಕೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಮಂಗಳವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಎ.28ರಂದು 11.30ಕ್ಕೆ ಬೆಳಗಾವಿಗೆ ಬರಲಿರುವ ಪ್ರಧಾನಿ ಮೋದಿ ಅವರು ಮಾಲಿನಿ ಸಿಟಿ ಮೈದಾನದಲ್ಲಿ 12 ಗಂಟೆಗೆ ನಡೆಯಲಿರುವ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೇರಿದಂತೆ ಸ್ಥಳೀಯ ಬಿಜೆಪಿ ಶಾಸಕರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

ಪ್ರಧಾನಿ ಮೋದಿ ಜಿಲ್ಲೆಗೆ ಆಗಮಿಸುವುದರಿಂದ ಕೇವಲ ಬದಲಾವಣೆವಲ್ಲ ಪರಿವರ್ತನೆ ಆಗುತ್ತದೆ. ಬೇರೆ ಪಕ್ಷದವರು ಕೂಡ ಕಾರ್ಯಕ್ರಮಕ್ಕೆ ಬರುತ್ತಾರೆ. ಹಿಂದಿನ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News