×
Ad

ಎ.28ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Update: 2024-04-25 14:09 IST

ನರೇಂದ್ರ ಮೋದಿ | PC : PTI 

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ 28 ಮತ್ತು 29ರಂದು ರಾಜ್ಯಕ್ಕೆ ಭೇಟಿ ಕೊಡಲಿದ್ದು, ವಿವಿಧೆಡೆ ಬೃಹತ್ ಪ್ರಚಾರ ಸಭೆಗಳಲ್ಲಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಎ.28ರ ಬೆಳಗ್ಗೆ 10 ಗಂಟೆಗೆ ಬೆಳಗಾವಿ, ಮಧ್ಯಾಹ್ನ 12 ಗಂಟೆಗೆ ಶಿರಸಿ, 2 ಗಂಟೆಗೆ ದಾವಣಗೆರೆ, ಸಂಜೆ 4 ಗಂಟೆಗೆ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡುವರು. 29ರಂದು ಬೆಳಿಗ್ಗೆ 11 ಗಂಟೆಗೆ ಬಾಗಲಕೋಟೆಯಲ್ಲಿ ಸಭೆ ಏರ್ಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News