×
Ad

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಸಲು ಸಿಎಂ ಒಪ್ಪಿಗೆ : ಪ್ರಿಯಾಂಕ್ ಖರ್ಗೆ

Update: 2024-09-05 21:28 IST

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ ಸಚಿವರು ಒಪ್ಪಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಮುಖ್ಯಮಂತ್ರಿಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದು ಸಭೆಯ ದಿನಾಂಕ ಸದ್ಯದಲ್ಲೇ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದರಿಂದ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯದಂತ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಮತ್ತು ಇದರಿಂದ ಮಹತ್ತರ ಬೆಳವಣಿಗೆಯಾಗಲಿದೆ. ಈ ಭಾಗದ ಅಭಿವೃದ್ದಿಗೆ ನಾನು ಹಾಗೂ ನಮ್ಮ ಸರಕಾರ ಸದಾ ಕಟಿಬದ್ಧವಾಗಿದ್ದು ಉದ್ದೇಶಿತ ಸಭೆ ನಮ್ಮೆಲ್ಲ ಆಶೋತ್ತರಗಳಿಗೆ ಸ್ಪಂದಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News