×
Ad

ಚುನಾವಣೆಯಲ್ಲಿ ಸೋಲಿಸುವಲ್ಲಿ ಸಾವರ್ಕರ್ ಪಾತ್ರದ ಬಗ್ಗೆ ಅಂಬೇಡ್ಕರ್ ಬರೆದ ಪತ್ರ ಹಂಚಿಕೊಂಡ ಪ್ರಿಯಾಂಕ್ ಖರ್ಗೆ

Update: 2025-03-18 16:25 IST

ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನನ್ನನ್ನು ಚುನಾವಣೆಯಲ್ಲಿ ಸೋಲಿಸುವಲ್ಲಿ ಸಾವರ್ಕರ್ ಪಾತ್ರವಹಿಸಿದ್ದಾರೆ ಎಂದು ಹೇಳಿದ ಪತ್ರವನ್ನು ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಶಾಸಕರು ಯಾವಾಗ ರಾಜೀನಾಮೆ ನೀಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಎಸ್ಇಪಿ, ಟಿಎಸ್ಪಿ ಕಾನೂನು ಜಾರಿಗೊಳಿಸಿದ ವಿಚಾರವನ್ನು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು, ಬಿ.ಆರ್.ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಕಾಂಗ್ರೆಸ್, ಅವರು ನಿಧನರಾದ ಸಂದರ್ಭದಲ್ಲಿ ಗೌರವಯುತವಾಗಿ ಅಂತ್ಯಕ್ರಿಯೆಯನ್ನು ನಡೆಸಿಲ್ಲ ಎಂದು ಟೀಕಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, 1952ರಲ್ಲಿ ಅಂಬೇಡ್ಕರ್ ಬರೆದ ಪತ್ರದಲ್ಲಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ದಾಮೋದರ್ ಸಾವರ್ಕರ್ ಎಂದು ಬರೆದಿದ್ದಾರೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಶಾಸಕರು ಅಂಬೇಡ್ಕರ್ ಈ ರೀತಿ ಹೇಳಿರುವುದನ್ನು ಸಾಬೀತುಪಡಿಸುವಂತೆ ಆಗ್ರಹಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಅಂಬೇಡ್ಕರ್ ಬರೆದಿರುವ ಪತ್ರವನ್ನು ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣೆ ವೇಳೆ ಸಾವರ್ಕರ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ವಿರುದ್ಧ ನಡೆದುಕೊಂಡಿದ್ದಾರೆ ಎಂಬುದಕ್ಕೆ ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇವೆ ಎಂದು ಬಿಜೆಪಿ ಶಾಸಕರು ಸದನದಲ್ಲಿ ಘೋಷಿಸಿದ್ದಾರೆ. 1952ರ ಜನವರಿ 18ರಂದು, ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಪರಿಚಯಸ್ಥರಿಗೆ ಪತ್ರ ಬರೆದರು. ಆ ಪತ್ರದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಹೇಗೆ ಪಾತ್ರ ವಹಿಸಿದರು ಎಂಬುದರ ಕುರಿತು ಉಲ್ಲೇಖವಿದೆ. ತಮ್ಮ ಪತ್ರದಲ್ಲಿ, ಡಾ.ಅಂಬೇಡ್ಕರ್ ಅವರು ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ವಿವರಣೆ ನೀಡಿದ್ದಾರೆ. ಪತ್ರ ಇಲ್ಲಿದೆ. ಬಿಜೆಪಿ ಶಾಸಕರು ಯಾವಾಗ ರಾಜೀನಾಮೆ ನೀಡುತ್ತಾರೆ ಎಂದು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News