×
Ad

ಘನತ್ಯಾಜ್ಯ ನಿರ್ವಹಣೆ | ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಪ್ರತಿ ತಿಂಗಳ 5ನೆ ತಾರೀಖಿನೊಳಗೆ ಗೌರವಧನ ಪಾವತಿ : ಪ್ರಿಯಾಂಕ್ ಖರ್ಗೆ ನಿರ್ದೇಶನ

Update: 2025-07-14 20:59 IST

ಪ್ರಿಯಾಂಕ್ ಖರ್ಗೆ

ಬೆಂಗಳೂರು : ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ‘ಸಂಜೀವಿನಿ’ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಮಹಿಳೆಯರಿಗೆ ಪ್ರತಿ ತಿಂಗಳ 5ನೆ ತಾರೀಖಿನೊಳಗೆ ಕಡ್ಡಾಯವಾಗಿ ಗೌರವಧನ ಪಾವತಿಸಲು ಹಾಗೂ ಹಿಂದಿನ ಬಾಕಿಯನ್ನು ಪಾವತಿಸಲು ಕ್ರಮವಹಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತ್ಯಾಜ್ಯ ಉತ್ಪಾದಕರಿಂದ ಪ್ರತಿ ತಿಂಗಳು ಪಡೆಯಬಹುದಾದ ಬಳಕೆದಾರರ ಶುಲ್ಕವನ್ನು ಸರಕಾರಿ ಆದೇಶದಲ್ಲಿ ವಿವರಿಸಿದಂತೆ ಸಂಗ್ರಹಿಸಲು ಅಗತ್ಯ ಕ್ರಮ ವಹಿಸಿ, ಸಂಗ್ರಹಿತ ಶುಲ್ಕವನ್ನು ತ್ಯಾಜ್ಯ ನಿರ್ವಹಣೆಯ ಪ್ರಕ್ರಿಯೆಯಲ್ಲಿ ಬಳಸಬೇಕು. ಸಾಮಾಜಿಕ ಭದ್ರತಾ ದೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ಒಕ್ಕೂಟದ ಮಹಿಳೆಯರಿಗೆ ವಿಮಾ ಯೋಜನೆಗಳಡಿ ವಿಮೆಯನ್ನು ಮಾಡಿಸಲು ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ.

ಘನ ತ್ಯಾಜ್ಯ ನಿರ್ವಹಣೆಗಾಗಿ ಬಳಸಲಾಗುತ್ತಿರುವ ವಾಹನಗಳ ಪರವಾನಗಿ (ದಾಖಲಾತಿಗಳು, ವಿಮೆ) ಮತ್ತು ವಾಹನ ಚಾಲಕರ ಚಾಲನಾ ಪರವಾನಗಿಯನ್ನು ದೃಢೀಕರಿಸಿಕೊಳ್ಳಲು ಅನುವು ಮಾಡಿಕೊಡಬೇಕು ಹಾಗೂ ಪರವಾನಗಿ ಇಲ್ಲದ ವಾಹನಗಳಿಗೆ ತುರ್ತಾಗಿ ಪರವಾನಗಿ ಮಾಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಘನ ತ್ಯಾಜ್ಯ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗಳು ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಜೊತೆ ಮಾಡಿಕೊಳ್ಳಲಾದ ಒಡಂಬಡಿಕೆಯ ಅವಧಿ ಮುಕ್ತಾಯಗೊಂಡಿದ್ದಲ್ಲಿ ಒಡಂಬಡಿಕೆಯನ್ನು ನವೀಕರಿಸಲು ಕ್ರಮ ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News