ಪಂಚಾಯಿತಿಗಳಿಗೆ ಪಕ್ಷದ ಚಿನ್ಹೆಯಡಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ರಚನೆಗೆ ಚಿಂತನೆ : ಪ್ರಿಯಾಂಕ್ ಖರ್ಗೆ
Update: 2025-08-13 23:16 IST
ಬೆಂಗಳೂರು, ಆ.13 : ಕೇರಳದ ಮಾದರಿಯಲ್ಲಿ ರಾಜ್ಯದಲ್ಲೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಪಕ್ಷದ ಚಿನ್ಹೆಯಡಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ರಚನೆ ಮಾಡುವ ಚಿಂತನೆ ಇದ್ದು, ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿಯ ಕಾನೂನು ತೊಡಕುಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬುಧವಾರ ಗಮನ ಸೆಳೆಯುವ ಕಲಾಪದ ವೇಳೆ ಆಡಳಿತ ಪಕ್ಷದ ಸದಸ್ಯ ಮಂಜುನಾಥ್ ಭಂಡಾರಿ ಮತ್ತು ಬಿಜೆಪಿ ಡಿ.ಎಸ್.ಅರುಣ್ ಈ ಬಗ್ಗೆ ಪ್ರಸ್ತಾಪಿಸಿದರು.
ಇದಕ್ಕೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಕಾರಣ ಗ್ರಾಮ ಪಂಚಾಯಿತಿ ಅಧಿಕಾರಾವಧಿ ಇನ್ನೂ ಒಂದೆರಡು ವರ್ಷವಿದೆ. ಇನ್ನು ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಮೀಸಲಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಸರಕಾರ ಚುನಾವಣೆ ನಡೆಸಲಿದೆ ಎಂದರು.