×
Ad

ರೂಪಾಯಿ ಮೌಲ್ಯ ಕುಸಿತ | ಮೋದಿಜಿಯ ಮಾಸ್ಟರ್ ಸ್ಟ್ರೋಕ್ ಎಂದು ಬಿಜೆಪಿ ಆಚರಿಸುತ್ತದೆಯೇ? : ಪ್ರಿಯಾಂಕ್ ಖರ್ಗೆ

Update: 2025-12-04 16:28 IST

 ಪ್ರಿಯಾಂಕ್ ಖರ್ಗೆ

ಬೆಂಗಳೂರು : ಭಾರತೀಯ ರೂಪಾಯಿಯು ಅಮೆರಿಕನ್ ಡಾಲರ್ ಎದುರು 90.2 ರೂಪಾಯಿಗೆ ಕುಸಿದಿದ್ದು, ಇತಿಹಾಸದಲ್ಲೇ ಅತೀ ಕಡಿಮೆ ಮಟ್ಟಕ್ಕೆ ತಲುಪಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, " ಈ ವೈಫಲ್ಯಗಳನ್ನು ಮೋದಿಜಿಯ ಮಾಸ್ಟರ್ ಸ್ಟ್ರೋಕ್ ಎಂದು ಬಿಜೆಪಿ ಆಚರಿಸುತ್ತದೆಯೇ?" ಎಂದು ವ್ಯಂಗ್ಯವಾಡಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಅವರು, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ. ಇದೇ ಮೊದಲ ಬಾರಿಗೆ ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಭಾರತದ ಜಿಡಿಪಿ ಅಂಕಿ ಅಂಶಗಳಿಗೆ ʼಸಿʼ ಗ್ರೇಡ್ ನೀಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರಕಾರವೇ ನೀಡಿದ ಮಾಹಿತಿಯಂತೆ ಕಳೆದ 5 ವರ್ಷಗಳಲ್ಲಿ 2 ಲಕ್ಷ ಕಂಪನಿಗಳು ಬಾಗಿಲು ಮುಚ್ಚಿವೆ, ಮತ್ತು ಕೇಂದ್ರ ಸರಕಾರದ ಬಳಿ ಉದ್ಯೋಗ ಕಳೆದುಕೊಂಡವರ ಭದ್ರತೆಗೆ ಯಾವುದೇ ಯೋಜನೆಗಳು ಇಲ್ಲ. ಅಂತರರಾಷ್ಟ್ರೀಯ ಪಾಸ್‌ಪೋರ್ಟ್‌ ಸೂಚ್ಯಂಕದಲ್ಲಿ ಭಾರತದ ಪಾಸ್‌ಪೋರ್ಟ್‌ ಪಾತಾಳಕ್ಕೆ ಕುಸಿದಿದೆ ಎಂದು ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News