×
Ad

RSS ಅನ್ನು ಯಾರೇ ಪ್ರಶ್ನಿಸಿದರೂ, ಬಿಜೆಪಿ ತನ್ನ ಗಾಂಭೀರ್ಯ ಕಳೆದುಕೊಳ್ಳುತ್ತದೆ : ಪ್ರಿಯಾಂಕ್‌ ಖರ್ಗೆ

Update: 2026-06-25 16:24 IST

ಪ್ರಿಯಾಂಕ್‌ ಖರ್ಗೆ (Photo: PTI)

ಬೆಂಗಳೂರು : RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ. RSS ಅನ್ನು ಯಾರೇ ಪ್ರಶ್ನಿಸಿದರೂ, ಬಿಜೆಪಿ ತನ್ನ ಗಾಂಭೀರ್ಯ ಕಳೆದುಕೊಳ್ಳುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಯಾವ ಕೊಡುಗೆಯನ್ನೂ ನೀಡದ ಸಂಘಟನೆ ಇಂದು ದೇಶಕ್ಕೆ ದೇಶಭಕ್ತಿಯ ಪಾಠ ಹೇಳುವುದೇಕೆ ಎಂದು RSSನ ಪ್ರಶ್ನಿಸಿದರೆ - ಬಿಜೆಪಿ ಬುಸುಗುಡುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿ-ಆರೆಸ್ಸೆಸ್‌ಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ನಾಗಪುರದಲ್ಲಿ ತ್ರಿವರ್ಣ ಧ್ವಜ ಹಾರಿಸಲು 52 ವರ್ಷ ಏಕೆ ಬೇಕಾಯಿತು ಎಂದು RSSನ ಪ್ರಶ್ನಿಸಿದರೆ - ಬಿಜೆಪಿ ಬುಸುಗುಡುತ್ತದೆ. ಅವರು ನಿಜವಾಗಿ ಯಾರ ಸಂವಿಧಾನಕ್ಕೆ ನಿಷ್ಠೆ ತೋರುತ್ತಾರೆ — ಬಾಬಾಸಾಹೇಬರ ಸಂವಿಧಾನಕ್ಕೋ, ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು RSSನ ಪ್ರಶ್ನಿಸಿದರೆ - ಬಿಜೆಪಿ ಬುಸುಗುಡುತ್ತದೆ. ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು, ತೆರಿಗೆ ಪಾವತಿಸಲು ಏಕೆ ನಿರಾಕರಿಸುತ್ತಾರೆ ಎಂದು RSSನ ಪ್ರಶ್ನಿಸಿದರೆ - ಬಿಜೆಪಿ ಬುಸುಗುಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

RSS ಬೋಧಿಸುವುದನ್ನು RSSಗೇ ಪಾಲಿಸುವಂತೆ ಕೇಳಿಕೊಂಡರೆ - ಬಿಜೆಪಿ ಬುಸುಗುಡುತ್ತದೆ. ಬಿಜೆಪಿ ಎಂದಿಗೂ ಕೇವಲ RSSನ ಜೊತೆಗಾರನಲ್ಲ, ಬದಲಿಗೆ ಅದು ಸದಾ RSS ನ ಸಾಧನ ಆಗಿದೆ. ಬಿಜೆಪಿಯ ಪ್ರತಿ ಬುಸುಗುಡುವಿಕೆ, ಅದರ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News