ಪ್ರಿಯಾಂಕ್ ಖರ್ಗೆ 

ಬೆಂಗಳೂರು : ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನಗದ ಪ್ರಗತಿಯನ್ನು ಪರಿಶೀಲಿಸಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಲಾಗಿದೆ.

ಉಪ ಸಮಿತಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ಸಣ್ಣ ನೀರಾವರಿ ಸಚಿವ ಡಾ.ಅಜಯ್ ಸಿಂಗ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor