ಆರೆಸ್ಸೆಸ್ ವಿರುದ್ಧ ಪೋಸ್ಟ್ ಪ್ರಕರಣ: ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್ಗೆ ಜಾಮೀನು ಮಂಜೂರು
ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್
ಬೆಂಗಳೂರು : ಆರೆಸ್ಸೆಸ್ ಹಾಗೂ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ರಿಗೆ 42ನೇ ಎಸಿಜೆಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯವು ವಿಚಾರಣೆ ನಡೆಸಿ, ಅಂತಿಮವಾಗಿ 10 ಸಾವಿರ ರೂ. ವೈಯಕ್ತಿಕ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಕೋರ್ಟ್ ಮುಂದೆ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ಹಾಜರಾಗಿದ್ದರು.