×
Ad

ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ: ಪ್ರತಾಪ್‌ ಸಿಂಹ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Update: 2025-07-07 19:28 IST

ಪ್ರಿಯಾಂಕ್‌ ಖರ್ಗೆ/ಪ್ರತಾಪ್ ಸಿಂಹ

ಬೆಂಗಳೂರು : ಅವಧಿ ಮೀರಿದ(ಔಟ್ ಡೇಟೆಡ್) ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್(ಮಾರುಕಟ್ಟೆ) ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಜಯೇಂದ್ರ ಹಠಾವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ ಎಂದು ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯ ವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಅವರು ಕಿಡಿಗಾರಿದ್ದಾರೆ.

ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News