×
Ad

ಝೀರೋ ಟ್ರಾಫಿಕ್ ಹೆಸರಿನಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಬೇಡ: ಪೊಲೀಸರಿಗೆ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ ಸೂಚನೆ

Update: 2023-07-08 13:25 IST

ಕಲಬುರಗಿ: ನಾವು ಸಂಚರಿಸುವಾಗ ಸಾರ್ವಜನಿಕರ ವಾಹನ‌ ಸಂಚಾರಕ್ಕೆ ತಡೆ ಮಾಡಬೇಡಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.

ಕಲಬುರಗಿಯಲ್ಲಿ ಇಂದು ಪೊಲೀಸ್ ಕಮೀಷನರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡು ಮಾತನಾಡುತ್ತಿದ್ದ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್/ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News