×
Ad

ಆಯುಷ್ ಆಸ್ಪತ್ರೆಗಳಿಗೆ ಸೂಕ್ತ ಮೇಲ್ವಿಚಾರಣೆ: ಸಚಿವ ದಿನೇಶ್ ಗುಂಡೂರಾವ್

Update: 2023-12-11 17:25 IST

ಬೆಳಗಾವಿ: ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯಿಂದ ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ 80 ಆಸ್ಪತ್ರೆಗಳಲ್ಲಿ ಈಗಾಗಲೇ 55 ಆಯುಷ್ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲಾಗಿದ್ದು, ಉಳಿದ 25 ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಜಿಲ್ಲಾ ಆಯಷ್ ಅಧಿಕಾರಿಗಳ ಪ್ರತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಆಸ್ಪತ್ರೆಗಳ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಆಯುಷ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊರತೆ ಇರುವ ಕಡೆ ಗಮನ ಹರಿಸಿ ಔಷಧಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಆಯುಷ್ ತಜ್ಞ ವೈದ್ಯರ ನೇಮಕಾತಿಗೆ  ಒತ್ತು ಕೊಡಲಾಗುತ್ತಿದೆ ಎಂದ ಅವರು, ಕೇಂದ್ರ ಸರಕಾರವು ಆಯುಷ್ ಆಸ್ಪತ್ರೆಗಳಿಗೆ ಔಷಧಿ, ಸಲಕರಣೆ ಮತ್ತು ಉಪಕರಣಕ್ಕೆ ನೀಡಿದ ಅನುದಾನದ ಸದ್ಭಳಕೆ ಮಾಡಲಾಗುತ್ತಿದೆ. ಎರಡು ತಿಂಗಳೊಳಗೆ ಅವಶ್ಯವಿರುವ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News