ವೇಶ್ಯಾವಾಟಿಕೆ ಚಟುವಟಿಕೆ: ವಿದೇಶಿ ಯುವತಿಯರ ರಕ್ಷಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.2: ವಿದೇಶಿ ಯುವತಿಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ಮಾದಕ ವಸ್ತು, ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಕೆ.ಆರ್.ಪುರಂ ಪೊಲೀಸರು ದಾಳಿ ನಡೆಸಿ ಆಫ್ರಿಕಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿರುವುದಾಗಿ ವರದಿಯಾಗಿದೆ.
ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರೀನ್ ವುಡ್ ಲೇಔಟ್‍ನ ಮನೆಯೊಂದರಲ್ಲಿ ಡ್ರಗ್ ಹಾಗೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೆ.1ರ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ದಾಳಿಯ ವೇಳೆ ದಂಧೆ ನಡೆಸುತ್ತಿದ್ದವರು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ.
ಬಂಧಿತ ಇಬ್ಬರು ವಿದೇಶಿ ಯುವತಿಯರ ವಿಚಾರಣೆ ನಡೆದಿದ್ದು, ಮಾನವ ಕಳ್ಳಸಾಗಾಣಿಕೆ ಮೂಲಕ ಬೆಂಗಳೂರಿಗೆ ಯುವತಿಯರನ್ನು ಕರೆ ತಂದು ದಂಧೆ ನಡೆಸುತ್ತಿರುವುದು ತಿಳಿದುಬಂದಿದೆ. ಯುವತಿಯರ ಪಾಸ್‍ಪೆÇೀರ್ಟ್ ಕಸಿದಿಟ್ಟುಕೊಂಡು ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂದು ಗೊತ್ತಾಗಿದೆ. ಈ ಬಗ್ಗೆ ಮತ್ತಷ್ಟು ವಿಚಾರಣೆ ಕೈಗೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.