×
Ad

ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ

Update: 2025-12-11 21:12 IST

Screengrab:X

ಬೆಳಗಾವಿ(ಸುವರ್ಣವಿಧಾನಸೌಧ): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರ ಒಲಂಪಿಕ್ಸ್, ಪ್ಯಾರಾ-ಒಲಂಪಿಕ್ಸ್, ಕಾಮನ್‍ವೆಲ್ತ್, ಏಶಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್‍ಸ್ಟೇಬಲ್‍ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ಸೈಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದರು.

ಅಲ್ಲದೇ, ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News