ಜ.23ಕ್ಕೆ ಪಿಎಸ್‍ಐ ಮರು ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
Update: 2024-01-20 20:54 IST
Photo: freepik
ಬೆಂಗಳೂರು, ಜ.20: ಬೆಂಗಳೂರು ನಗರದಲ್ಲಿ ಜ.23ರಂದು ಪಿಎಸ್‍ಐ ನೇಮಕಾತಿ ಲಿಖಿತ ಮರು ಪರೀಕ್ಷೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಶನಿವಾರ ಆದೇಶ ಹೊರಡಿಸಿದ್ದಾರೆ.
545 ಪಿಎಸ್‍ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಜ.23ರ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.