×
Ad

ಪಿಎಸ್ಐ ಮರುಪರೀಕ್ಷೆ ಫಲಿತಾಂಶ ಪ್ರಕಟ

Update: 2024-03-01 19:33 IST

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪಿಎಸ್ಐ ಮರು ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದೆ.

ಒಟ್ಟು 35,823 ಮಂದಿ ಪರೀಕ್ಷೆ ಬರೆದಿದ್ದರು. ಅವರಲ್ಲಿ ವಿವಿಧ ಕಾರಣಗಳಿಂದಾಗಿ 33 ಮಂದಿಯ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ತೆಗೆದುಕೊಂಡಿರುವ ಅಂಕಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಈ ಬಗ್ಗೆ ಆಕ್ಷೇಪಗಳು ಇದ್ದಲ್ಲಿ ಇದೇ 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಬೇಕು. ಅದರ ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ನಂತರ ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ರಮ್ಯಾ ಅವರು ತಿಳಿಸಿದ್ದಾರೆ.

ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಜನವರಿ 23ರಂದು ಮರು ಪರೀಕ್ಷೆ ನಡೆದಿತ್ತು. ಫೆಬ್ರವರಿ 23ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು

ಒಟ್ಟು 545 ಹುದ್ದೆಗಳಿಗೆ ನೇಮಕಾತಿ ಮಾಡುವ ಸಂಬಂಧ ಗೃಹ ಇಲಾಖೆ ಅರ್ಜಿ ಆಹ್ವಾನಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News