×
Ad

ಬಿ.ಕೆ.ಹರಿಪ್ರಸಾದ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ: ಬಿ.ವೈ.ವಿಜಯೇಂದ್ರ

Update: 2024-01-06 20:34 IST

ಮೈಸೂರು: ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಕೂಡಲೇ ಬಂಧಿಸಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಸಮಾಜ ಹೊಡೆಯುವಂತ ಹೇಳಿಕೆಯನ್ನು ನೀಡಿದ್ದಾರೆ. ಅವರನ್ನು ಬಂಧಿಸಿ ಮಂಪರು ಪರೀಕ್ಷಗೆ ಒಳಪಡಿಸುವ ನಿರ್ಧಾರವನ್ನು ಮುಖ್ಯಮಂತ್ತಿ ಸಿದ್ಧರಾಮಯ್ಯ ಅವರು ಕೈಗೊಳ್ಳಬೇಕು ಎಂದು ಹೇಳಿದರು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸಚಿವರ, ಶಾಸಕರುಗಳ ಹೇಳಿಕೆಗಳು ಸಮಾಜ ಹೊಡೆಯುವ ಕೆಲಸ ಮಾಡುತ್ತಿದೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಎಂದು ಹೇಳಿದರು.

ಡಿ.ಜೆ.ಹಳ್ಳಿ ಕೆಜೆ ಹಳ್ಳಿ ಪ್ರಕರಣದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News