×
Ad

ಪರಿಷತ್ ಚುನಾವಣೆ | ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿ ಹಾಕಿ ಕೊಳ್ಳಲಿದ್ದಾರೆ : ಆರ್.ಅಶೋಕ್

Update: 2026-06-18 22:22 IST

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ವಿಧಾನಸೌಧದಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್-5, ಬಿಜೆಪಿ-2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ.

ಈ ಸಂಬಂಧ ಪ್ರಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಚುನಾವಣೆಯಲ್ಲಿ ಮೂರು ಮತಗಳು ಅಡ್ಡಮತದಾನವಾಗಿದೆ. ಒಂದು ಮತ ಅಸಿಂಧುವಾಗಿದೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿ ಹಾಕಿ ಕೊಳ್ಳಲಿದ್ದಾರೆ. ಅಡ್ಡ ಮತದಾನ ಮಾಡಿದವರು ಯಾರು ಮತ್ತು ಏಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಪಕ್ಷದ ವೇದಿಕೆಯಲ್ಲಿ ಇದನ್ನು ಚರ್ಚೆ ಮಾಡುತ್ತೇವೆ’ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News