ಬೆಂಗಳೂರು : ವಾಲ್ಮೀಕಿ ನಿಗಮದ ಹಣ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ವಿಧಾನಸಭೆ ವಿಪಕ್ಷ ನಾಯಕ‌ ಆರ್.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ.

ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದರು. ಆಗ ಗೇಟ್ ಬಳಿಯೇ ತಡೆದು ವಶಕ್ಕೆ ಪಡೆಯಲಾಗಿದೆ.

ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ವಿಧಾನಸೌಧದ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ವಿಶೇಷವಾಗಿ ಶಾಸಕರು ಪ್ರವೇಶಿಸುವ ದ್ವಾರದ ಬಳಿ ವಾಹನ ಸವಾರರು ಹಾಗೂ ಜನಸಾಮಾನ್ಯರು ಪರದಾಡುವಂತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor