×
Ad

ರಾಹುಲ್ ಗಾಂಧಿ ಎಲ್ಲಿಯೂ ದೇಶಕ್ಕೆ ನೋವು ಮಾಡಿಲ್ಲ: ಡಿ.ಕೆ. ಶಿವಕುಮಾರ್

Update: 2026-01-26 00:14 IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತಕ್ಕೆ ನೋವು ಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ಪರಿಗಣಿಸಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ರವಿವಾರ ನಗರದ ಕುಮಾರಕೃಪದ ಸರಕಾರಿ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ವಿಚಾರವಾಗಿ ರಾಹುಲ್ ಗಾಂಧಿ ಅವರ ಹೇಳಿಕೆ ರಾಜಕೀಯ ತರಬೇಡಿ. ಹೃದಯ ಶ್ರೀಮಂತಿಕೆಯಿಂದ ಆಲೋಚಿಸಿ. ನಾವೆಲ್ಲರೂ ಈ ಪ್ರಗತಿಯನ್ನು ಸಂಭ್ರಮಿಸೋಣ, ಬೇರೆಯವರ ತಪ್ಪನ್ನು ಹುಡುಕುವುದು ಬೇಡ. ವಿದೇಶಕ್ಕೆ ಹೋಗಿ ನಾವು ಭಾರತಕ್ಕೆ ನೋವು ಮಾಡುವುದಿಲ್ಲ. ರಾಹುಲ್ ಗಾಂಧಿ ಅವರು ಕೂಡ ಈ ರೀತಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ನಮ್ಮ ಆಂತರಿಕ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಪ್ರವಾಸದ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡಿದ್ದ ಬಗ್ಗೆ ಕೇಳಿದಾಗ, ನಾನು ಬಿಜೆಪಿ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ನಾನು ಭಾರತ ಹಾಗೂ ಕರ್ನಾಟಕ ರಾಜ್ಯಕ್ಕೆ ಮಾತ್ರ ಉತ್ತರ ನೀಡುತ್ತೇನೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಕರ್ನಾಟಕ ಭಾರತಕ್ಕೆ ಹೆಮ್ಮೆ ತರುತ್ತಿದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ, ವಿದೇಶದಲ್ಲೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ. ಕ್ಯಾಲಿಫೆÇೀರ್ನಿಯಾದಲ್ಲಿ 13 ಲಕ್ಷ ಇಂಜಿನಿಯರಿಂಗ್ ವೃತ್ತಿ ಪರರಿದ್ದಾರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರಿಂಗ್ ವೃತ್ತಿಪರರಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದರು.

ಅದೇ ರೀರಿ, ಕರ್ನಾಟಕ 13,900 ವೈದ್ಯರನ್ನು ಪ್ರತಿ ವರ್ಷ ತಯಾರು ಮಾಡುತ್ತಿದ್ದಾರೆ. ದೇಶದ ಇತರೆ ಯಾವುದೇ ರಾಜ್ಯಕ್ಕೂ ಈ ರೀತಿ ಸಾಮರ್ಥ್ಯವಿಲ್ಲ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷ ವೈದ್ಯಕೀಯ ವೃತ್ತಿಪರರು ತಯಾರಾಗುತ್ತಿದ್ದಾರೆ ಎಂದ ಅವರು, ನಾನು ಕರ್ನಾಟಕ ರಾಜ್ಯವನ್ನು ಇತರೆ ಯಾವುದೇ ರಾಜ್ಯದೊಂದಿಗೆ ಹೋಲಿಕೆ ಮಾಡುತ್ತಿಲ್ಲ. ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ. ಬೆಂಗಳೂರಿನ ಬಗ್ಗೆ ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರು ಏನು ಹೇಳಿದ್ದಾರೆ? ಅವರು ಬೇರೆ ರಾಜ್ಯಗಳ ನಗರಕ್ಕೆ ಹೋಗಿ, ಆ ನಗರವನ್ನು ಜಾಗತಿಕ ನಗರ ಎಂದು ಕರೆದಿಲ್ಲ, ಬೆಂಗಳೂರನ್ನು ಜಾಗತಿಕ ನಗರ ಎಂದು ಬಣ್ಣಿಸಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಸಂಚಾರ ದಟ್ಟಣೆ 2ನೆ ಸ್ಥಾನಲ್ಲಿದೆ ಎಂದು ಕೇಳಿದಾಗ, ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಿಸಬೇಕು ಎಂಬ ಕಾರಣಕ್ಕೆ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2.50 ಲಕ್ಷ ಕೋಟಿ ಹಣವನ್ನು ಐದು ವರ್ಷಗಳಲ್ಲಿ ವೆಚ್ಚ ಮಾಡಲಾಗುತ್ತಿದೆ. ಅದಕ್ಕಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಟನಲ್ ರಸ್ತೆಗಳು, 123 ಕಿ.ಮೀ ಎಲಿವೇಟೆಡ್ ಕಾರಿಡಾರ್ ಗಳು, 300 ಕಿ.ಮೀ ಉದ್ದದ ಬಫರ್ ರೋಡ್ ಗಳನ್ನು ನಿರ್ಮಿಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News