×
Ad

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ | ರಾಹುಲ್‌ ಗಾಂಧಿ ಭೇಟಿ ಬಳಿಕ ʼಐ ಆ್ಯಮ್​ ಹ್ಯಾಪಿʼ ಎಂದ ಸಚಿವ ಕೆ.ಎಚ್.ಮುನಿಯಪ್ಪ

Update: 2026-06-05 17:55 IST

screengrab : x/@ANI

ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮಧ್ಯೆ ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಅವರೂ ಕೂಡ ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. 

ಈ ಬಗ್ಗೆ ಖುದ್ದು ರಾಹುಲ್ ಗಾಂಧಿ ಬಳಿಯೇ ಮುನಿಯಪ್ಪ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸಮಾಧಾನಗೊಂಡಿರುವ ಮುನಿಯಪ್ಪ, ʼಐ ಆ್ಯಮ್​ ಹ್ಯಾಪಿʼ ಎಂದಿದ್ದಾರೆ.

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಕೆ.ಎಚ್‌.ಮುನಿಯಪ್ಪ ಅವರು, ವಿಪಕ್ಷ ನಾಯಕ ರಾಹುಲ್ ಗಾಂಧಿ​, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದು, ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಐ ಆ್ಯಮ್​ ಹ್ಯಾಪಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News