×
Ad

ಲೋಕಸಭಾ ಚುನಾವಣೆಯಲ್ಲಿ ‘ಮತಗಳ್ಳತನ’ ಆರೋಪ: ಆ.4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನಾ ಪಾದಯಾತ್ರೆ

Update: 2025-07-29 21:01 IST
File Photo: PTI

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ‘ಮತಗಳ್ಳತನ’ ಆಗಿರುವ ಬಗ್ಗೆ ದಾಖಲೆಗಳಿರುವುದಾಗಿ ತಿಳಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆ.4ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಲು ಉದ್ದೇಶಿಸಿದ್ದಾರೆ.

ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಚಿವರು, ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹೆಜ್ಜೆ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News