×
Ad

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Update: 2025-05-10 20:15 IST

ಸಾಂದರ್ಭಿಕ ಚಿತ್ರ

ಬೆಂಗಳೂರು :  ನಾಳೆಯಿಂದ(ಮೇ 11) ಮೂರು ದಿನಗಳ ಕಾಲ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 11ರಿಂದ ಮೇ 13ರ ವರೆಗೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಯಾದಗಿರಿಯಲ್ಲಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲೆಯಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಆದರೆ, ಮೇ 11ರಂದು ಬಾಗಲಕೋಟೆ, ಬೀದರ್ ಮತ್ತು ವಿಜಯಪುರಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಉಳಿದ ಎರಡು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News