ಕರಾವಳಿ ಜಿಲ್ಲೆಗಳಾದ್ಯಂತ ಆ.2ರ ವರೆಗೆ ಸಾಧಾರಣ ಮಳೆ ಸಾಧ್ಯತೆ
Update: 2025-07-27 20:51 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಆಗಸ್ಟ್ 2ರ ತನಕ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಬಿಟ್ಟು-ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.